ದಿನಾ ಬೆಳಿಗ್ಗೆ ಈ ಹೆಗ್ಗಣ ನನ್ನ ಕಣ್ಣಿಗೆ ಬೀಳುತ್ತದೆ.
ತನ್ನ ಬಿಲದಿಂದ ಮೆಲ್ಲ ಹೊರಗಿಣುಕಿ ರಸ್ತೆಯುದ್ದಕ್ಕೂ ನೋಡುತ್ತದೆ.
ಬೇಗನೆದ್ದು ಕೆಲಸಕ್ಕೆ ಹೋಗುವವರು, ಪೇಪರ್ ಹಾಕುವ ಹುಡುಗರು, ಕೊಳವೆ ಬಾವಿಯಿಂದ ನೀರು ಹಿಡಿಯಲು ಓಡಾಡುವವರು ಬಿಟ್ಟರೆ ಬೇರ್ಯಾರೂ ಇರುವುದಿಲ್ಲ.
ಮತ್ತು ಇವರೆಲ್ಲ ಹೆಗ್ಗಣ ದಿನಾ ನೋಡುವವರೇ. ಅವರಿದ್ದರೆ ಹೆಗ್ಗಣ ಅಷ್ಟು ಕೇರ್ ಮಾಡುವುದಿಲ್ಲ. ಅಪರಿಚಿತರ್ಯಾರೂ ಇಲ್ಲವೆಂದು ಖಚಿತ ಪಡಿಸಿಕೊಂಡು ತನ್ನ ಬಿಲದಾಚೆಗೆ ಕಾಲಿಡುತ್ತದೆ.
ನಂತರ ತನ್ನದೇ ರಾಜ್ಯವಿದು ಎನ್ನುವಂತೆ ಅತ್ತಿತ್ತ ಓಡಾಡುತ್ತದೆ.
ನೂರು ಫೀಟ್ ಉದ್ದಕ್ಕೆ ರಸ್ತೆಯ ಇಕ್ಕೆಲಗಳಲ್ಲಿರುವ ಮನೆಗಳ ಬದಿಯಲ್ಲಿ ತನಗೆ ಬೇಕಾದುದು ಆರಿಸಿಕೊಳ್ಳುತ್ತದೆ. ಮತ್ತೆ ಭಕ್ತಿಯಿಂದ, ಇದು ತನ್ನ ದಿನ ನಿತ್ಯದ ಕೆಲಸವೋ ಎಂಬಂತೆ ತಿನ್ನುತ್ತದೆ.
ಆ ತಿನ್ನುವ ಕೆಲಸದಲ್ಲಿ ನನಗೆ ಹಸಿವು ಕಾಣುವುದೇ ಇಲ್ಲ.
ನನಗೆ ಈ ಹೆಗ್ಗಣ, ಆ ರಸ್ತೆಯ ಶುಚಿತ್ವದ ಜವಾಬ್ದಾರಿ ಹೊತ್ತ ಜಾಡಮಾಲಿಯ ಹಾಗೆ ಕಾಣುತ್ತದೆ.
ಅದೆಂದೂ ಇದೇ ರಸ್ತೆಯ ಬೇರೆ ಹೆಗ್ಗಣಗಳ ಜತೆ ಬೆರೆತುದು ನಾನು ನೋಡಿಯೇ ಇಲ್ಲ.
ಬೇರೆ ಹೆಗ್ಗಣಗಳು ಸಮಯದ ಪರಿವೆಯೇ ಇಲ್ಲದೆ ಎಲ್ಲಂದರಲ್ಲಿ ಸುತ್ತಾಡುತ್ತವೆ. ಈ ಹೆಗ್ಗಣ ಹಾಗಲ್ಲ. ಟೈಮ್ ಟೇಬಲ್ ನಿಯತ್ತಾಗಿ ಕಾಪಾಡಿಕೊಳ್ಳುತ್ತದೆ.
ಬಹಳಷ್ಟು ಸಲ ಬೇರೆ ಬೇರೆ ಹೆಗ್ಗಣಗಳು ರಸ್ತೆಯಲ್ಲಿ ಗಾಡಿಗಳ ಚಕ್ರದಡಿ ಸಿಕ್ಕಿ ಅಪ್ಪಚ್ಚಿಯಾಗಿ, ಆಮೇಲೆ ಕಾಗೆಗಳಿಗೆ ಆಹಾರವಾದುದು ಕಣ್ಣಾರೆ ನೋಡಿದ್ದೇನೆ. ಕಣ್ಣು ಮುಚ್ಚಿಕೊಳ್ಳುತ್ತಲೇ, ಆ ಹೆಣ ಈ ಹೆಗ್ಗಣದ್ದಾಗಿರದಿರಲಿ ಅಂತ ಪ್ರಾರ್ಥಿಸಿದ್ದೇನೆ.
ಮಾರನೇ ದಿನ ಎಂದಿನಂತೆಯೇ ಬಿಲದಿಂದ ಹೊರಗೆ ಬಂದು ಓಡಾಡುವ ಹೆಗ್ಗಣಕ್ಕಾಗಿ ಕಾದು ಕುಳಿತು ಅದನ್ನು ನೋಡಿ ಸಂತಸ ಪಟ್ಟಿದ್ದೇನೆ.
ಅದು ರಸ್ತೆಯಲ್ಲಿ ತಿರುಗಾಡುವ ಹೊತ್ತು ಏನೆಂಬುದು ನನಗೆ ನಿಖರವಾಗಿ ಗೊತ್ತು.
ಅಷ್ಟು ಹೊತ್ತಿನ ನಂತರ ಅದು ಅದರ ಬಿಲದೊಳಗೆಯೇ ಇರುತ್ತದೆಯೆ ಅಥವಾ ಇನ್ನೆಲ್ಲಿಯಾದರೂ ಹೋಗುತ್ತದೆಯೇ ಅನ್ನುವುದು ನನ್ನ ಪಾಲಿಗೆ ರಹಸ್ಯ.
ಹೆಗ್ಗಣಕ್ಕೆ ಎಷ್ಟು ನಾಚಿಕೆ ಅಂದರೆ, ನಾನು ಕ್ಯಾಮರಾ ಹಿಡಿದು ಕಾಯುತ್ತಿದ್ದರೆ ಅದು ಹೇಗೋ ಅದಕ್ಕೆ ಗೊತ್ತಾಗಿಬಿಡುತ್ತದೆ. ಹೊರಗೆ ಬರುವುದೇ ಇಲ್ಲ...
ಅಥವಾ, ಪಬ್ಲಿಸಿಟಿ ಬೇಡ ಎಂಬ ಇರಾದೆಯೋ ಏನೋ? ನನಗೆ ಗೊತ್ತಿಲ್ಲ.
ಆದರೆ ತುಂಬಾ ಜಾಣ ಹೆಗ್ಗಣ, ಶಿಸ್ತಿನ ಹೆಗ್ಗಣ.
ಅದಕ್ಕೆ ತನ್ನನ್ನು ತಾನು ಹೇಗೆ ಕಾಪಾಡಿಕೊಳ್ಳಬೇಕೆಂದು ಗೊತ್ತು.
ಬೇರೆಯವರಿಗೆ ತೊಂದರೆ ಕೊಡದೆ ಒಳ್ಳೆಯ ರೀತಿಯಲ್ಲಿ ಹೇಗೆ ಬದುಕಬೇಕೆಂದು ಗೊತ್ತು.
........
ಕೆಲವು ರೀತಿಯ ಮನುಷ್ಯರನ್ನು ಹೆಗ್ಗಣಕ್ಕೆ ಹೋಲಿಸುತ್ತಾರಲ್ಲ?
ಈ ಒಳ್ಳೆ ಹೆಗ್ಗಣ ನೋಡಿದ ಮೇಲೆ ಆ ಹೋಲಿಕೆ ಸುಳ್ಳೆನಿಸುತ್ತಿದೆ.
ಮತ್ತೆ ಎಲ್ಲಾ ಹೆಗ್ಗಣಗಳೂ ಹೀಗೇ ಇರಬಹುದೇನೋ ಅಂತ ಸಂಶಯ ಬರುತ್ತದೆ.
ಅಪವಾದಗಳನ್ನು ಉದಾಹರಣೆಗಳಾಗಿ ತೆಗೆದುಕೊಳ್ಳಬಾರದು ಎನ್ನುವುದು ಹಲವಾರು ಬಾರಿ ಅನುಭವವಾಗಿದೆ. ಆದರೂ ಈ ಹೆಗ್ಗಣ ಸತ್ಯವೆಂದು ನಂಬಬೇಕು ಅನಿಸುತ್ತಿದೆ.
9 comments:
ತುಂಬಾ ಚೆನ್ನಾಗಿದೆ ...ಶ್ರೀ !
Real offbeat style .. Writing about hardly noticed things ..
ಶ್ರೀ..
"ಆ ತಿನ್ನುವ ಕೆಲಸದಲ್ಲಿ ನನಗೆ ಹಸಿವು ಕಾಣುವುದೇ ಇಲ್ಲ." ಒಂದು ವಿಶಿಷ್ಟ ನೋಟ - ಅಭಿವ್ಯಕ್ತಿ.
ಬರಹ ಚೆನ್ನಾಗಿದೆ.
ಪ್ರೀತಿಯಿರಲಿ.
ಶ್ರೀ,
ಹೆಗ್ಗಣಗಳ ಸ್ವಭಾವ ದಿನಕಳೆದಂತೆ ಬದಲಾಗುವುದು ಸಹಜ, ಸಮಯಕ್ಕೆ ತಕ್ಕಂತೆ ಹೊಂದಿಕೊಳ್ಳದಿರುವ ಹೆಗ್ಗಣಗಳೂ ಅವುಗಳ ಆರಾಧಕರೂ ಕಷ್ಟದಲ್ಲಿ ಸಿಲುಕುವುದು ಸಹಜವೇ! :-)
ಹೆಗ್ಗಣಗಳನ್ನು ಹುಲು ಮಾನವರಿಗೆ ಹೋಲಿಸಿದವರಿಗೆ ಧಿಕ್ಕಾರವಿರಲಿ:)
ಯಾರೂ ನೋಡದ ವಿಚಾರಗಳನ್ನು ನೋಡಿ ದಾಖಲಿಸಿದ್ದೀರಿ. ಉತ್ತಮ ಬರಹ
sadhya naanalla antha samaadhanavaaythu
rasheed
ಶ್ರೀ,
ಹೆಗ್ಗಣದ ಬಗ್ಗೆ ಇಷ್ಟು ಗಮನವಿಟ್ಟು ನೋಡಿದ್ದೀರಾ !
ಹೆತ್ತವರಿಗೆ ಹೆಗ್ಗಣನೂ ಮುದ್ದಂತೆ..ಹಾಗೇ ನಿಮಗೆ ನಿಮ್ಮ ಹೆಗ್ಗಣನೂ ಮುದ್ದು :)
ಶ್ರೀ,
Nimma i article bahal chennagi mudi bandide...Ondu Heggana mele istondu sundaravagi varnisabahud anth heli kottiddira...
Bigbuj..
Anikethana, Sindhu, Venu, Bigbuj -
Dhanyavaada, hogali aTTakke erisiddeera, yaavag beeLtino gottilla! :)
Rasheed Sir,
KumabaLa kai kaLLa andre heglu muTTi noDkonDa aMta oMdu gaade unTante...:-)
Shiv,
indirect agi naanu heggaNa hettiddeeni aMtiddeeralla, nimage enu heLali? :(
Satish,
Naanu barediruvudu jaaNa heggaNada bagge.. yako eno, eradu dinadiMda adara darushana illa nanage... :(
Post a Comment