ಬೇಸರವಾದಾಗ ಮಾತ್ರ ಇಲ್ಲಿ ಬರುವುದಕ್ಕೆ ಇನ್ನೂ ಬೇಸರವಾಗ್ತಿದೆ!!ಬಣ್ಣ ಹಚ್ಚುವವರು...ಚಿತ್ರ ಯಾರದಾದರೇನು,
ನಮ್ಮದೇ ಬಣ್ಣ ಅಂದುಕೊಂಡು ಹಚ್ಚುತ್ತೇವೆ...
ಹಚ್ಚುತ್ತಿರುವ ತನಕ ನಮ್ಮದೇ ಬಣ್ಣ.
ನಮ್ಮದೇ ಚಿತ್ರ ಕೂಡ.
ಇವೆಲ್ಲ ಆಟ ನಡೆಯುವುದು
ನಮಗೆ ಬೇಕಾದ ಬಣ್ಣ
ಬೇಕಾದ ಹಾಗೆ ಹಚ್ಚಲು ಬಿಡುವವರೆಗೆ ಮಾತ್ರ!!
ಯಾಕೆ?ಹೂಗಿಡಕ್ಕೆ ನೀರು ಹೊಯ್ದು,
ಗೊಬ್ಬರ ಹಾಕಿ,
ದಿನಾ ಅದು ಏನು ಮಾಡುತ್ತಿದೆಯೆಂದು ನೋಡಿ
ಪ್ರೀತಿಯಿಂದ ಬೆಳೆಸುವುದು
ಯಾಕೆ?
ಕೊನೆಗೊಂದು ದಿನ ಹೂಬಿಟ್ಟಾಗ
ಕೊಯ್ದು ಕೊಲ್ಲಲಿಕ್ಕೆಯೇ?
ಬದುಕು ಅಡಗಿರುವುದೇ
ಅಡಗಿರುವುದನ್ನು ಹುಡುಕುವುದರಲ್ಲಿ...ಅಡಗಿರುವುದನ್ನು ಹುಡುಕುವುದೇ
ಒಂದು ದೊಡ್ಡ ಸಂಭ್ರಮ...
ಆದರೆ,
ಅಡಗಿರುವುದು ಎದುರಿಗೆ ತೆರೆದು ನಿಂತಾಗ
ಇನ್ಯಾವುದೋ ಅಡಗಿರುವುದರ ಕಡೆಗೆ
ಸೆಳೆಯುತ್ತದೆ ಮನ.
ನೋವುನೋವಿನಷ್ಟು ಸಿಹಿ ಇನ್ಯಾವುದೂ ಇಲ್ಲ ಅಂದಿದ್ದರು ಅವರು.
ನೋವು ಮನುಷ್ಯನನ್ನು ಬೆಳೆಸುತ್ತದೆ ಎಂದಿದ್ದರು ಇವರು.
ನನಗೆ ಮಾತ್ರ
ಸಿಹಿ ಬೇಕಾಗಿಲ್ಲ
ಬೆಳೆಯೋದೂ ಬೇಕಾಗಿಲ್ಲ
ಹಿಂಡಿ ತಿನ್ನೋ ಈ ನೋವು ಬೇಕಾಗಿಲ್ಲ..!! :-(