ಮುಂಗಾರು ಮಳೆಯೇ..ಏನು ನಿನ್ನ ಹನಿಗಳ ಲೀಲೆ
ನಿನ್ನ ಮುಗಿಲ ಸಾಲೇ... ಮಹಾಮಾರಿ ಜನರಿಗೆ ಉರುಳೇ
ಸುರಿವ ಬಲುಮೆಯಾ ಜಡಿಮಳೆಗೆ ಭೀತಿ ಮೂಡಿದೆ...
ಯಾವ ತಿಪ್ಪೆಯಲ್ಲಿ ಎಷ್ಟು ಪ್ಲಾಸ್ಟಿಕ್ ಬ್ಲಾಕಾಗುವುದೊ
ಎಲ್ಲಿ ಕೆಸರು ಹೊರಚಿಮ್ಮುವುದೋ ತಿಳಿಯದಾಗಿದೇ...
ಎದುರು ರೋಡಿನಲ್ಲಿ.. ನೀರು ತುಂಬಿ ಹರಿವಾ ಒನಪು
ನನ್ನ ಮನೆಯ ಎದುರು.. ಕೆಂಪು ಮಣ್ಣ ಹೆಜ್ಜೆಯ ಗುರುತು
ಗುಡುಗು ಸಿಡಿಲಿನಾ ಅಡಚಿಕ್ಕು... ಏನು ರಭಸವೋ...
ಅಕ್ಕ ಪಕ್ಕದಾ ಮನೆಗಳಿಗೆ ನೀರು ನುಗ್ಗಿ ಚೆಲ್ಲಾಪಿಲ್ಲಿ
ಕಂಗಾಲಾದ ಮನುಜರ ನೋಡು.. ಯಾಕೆ ಹೀಗೆಯೋ...
ಮನೆಯು ಮುಳುಗಿ ಹೋಯ್ತು.. ಅಳುತ ನಿಂದ ಹೆಂಗಸರೆಲ್ಲಾ
ಇದ್ದಬದ್ದದ್ದೆಲ್ಲಾ.. ಕಟ್ಟಿ ಹೊರಟರು ಮೆರವಣಿಗೆ...
ನೆರೆಯು ಬರದ ಊರಿನ ಕಡೆಗೆ... ವಿಧಿಯ ಆಟವೋ...
ಕೂಡಿಇಟ್ಟುದೆಲ್ಲಾ... ಕಳೆದು ಹೋದ ದು:ಖವು ಕಾಡಿ
ನೆಲೆಯು ಇಲ್ಲದಾಗಿ ಹೋಗಿ... ಏನು ನೋವಿದೂ...
...............
ಎಂದೋ ಬರೆದಿದ್ದು, ಅರ್ಧಕ್ಕೇ ನಿಂತುಬಿಟ್ಟಿದೆ. ಮುಂಗಾರು ಮಳೆ ಪಿಚ್ಚರ್ ಬಿಡುಗಡೆಯಾದ ಸಮಯದಲ್ಲಿ ಬರೆದಿದ್ದು... ಅದಾದ ನಂತರ ಎರಡು ಮುಂಗಾರು ಮಳೆ ಸೀಸನ್ ಕಳೆದಿದೆ, ಈಗಂತೂ ಪಕ್ಕಾ ಹಿಂಗಾರು ಮಳೆ ಸೀಸನ್... ಬರೆಯುವುದು ಬಿಟ್ಟು ಎಷ್ಟು ಸಮಯವಾಗಿದೆಯೆಂದರೆ, ಮುಂದುವರಿಸುವುದು ಹೇಗೆಂದೇ ಹೊಳೆಯುತ್ತಿಲ್ಲ!
3 comments:
ನೀವು ಈಗ ಬರೆದದ್ದು ಸಖತ್ ಆಗಿದೆ. ಮುಂಗಾರು ಮಳೆಯ ವಿಲಕ್ಷಣ ಕಾರ್ಯವನ್ನು ಸರಿಯಾಗಿ ತೋರಿಸುತ್ತದೆ. ಹೆಚ್ಚಿಗೆ ಬರೆಯಬೇಕಂತೇನಿಲ್ಲ.
ಶ್ರೀ,
ಮರಳಿ ಸ್ವಾಗತ !
ಅಂತೂ ೬ ತಿಂಗಳ ನಂತರ ಮತ್ತೆ ಬ್ಲಾಗ್ ಕೈಗೆತ್ತಿಕೊಂಡಿದ್ದೀರಿ ..
ಬರಲಿ ಇನ್ನೂ ಅನೇಕ ಮಳೆಗಳು ನಿಮ್ಮಿಂದ.
ಕನ್ನಡಕ್ಕೆ 99 %, ಇತರೆ ಭಾಷೆಗೆ 1%, ಸದ್ಯಕ್ಕೆ ವಿಕ್ಷಕರು : 23621+......
http://spn3187.blogspot.in
..
ಹೊಸದರ ಹುಡುಕಾಟದ ಕಡೆಗೆ..............
Post a Comment